ADVERTISEMENT

ಸಾಲ ಬಾಧೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2020, 9:44 IST
Last Updated 23 ಜುಲೈ 2020, 9:44 IST
ರೈತ ನಾಗಣ್ಣ
ರೈತ ನಾಗಣ್ಣ   

ಶನಿವಾರಸಂತೆ (ಕೊಡಗು ಜಿಲ್ಲೆ): ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲುವಾಗಿಲು ಗ್ರಾಮದ ರೈತ ನಾಗಣ್ಣ (58) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸನದ ಮಿಷನ್ ಆಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಗುರುವಾರ ಮೃತಪಟ್ಟಿದ್ದಾರೆ.

ನಾಗಣ್ಣ ಒಂದು ಎಕರೆ ಜಮೀನು ಹೊಂದಿದ್ದು ಕೃಷಿಗಾಗಿ ಬೆಸೂರು ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಸೇರಿದಂತೆ ಖಾಸಗಿಯಾಗಿ ಸಾಲ ಪಡೆದಿದ್ದರು ಎಂದು ಕುಟುಂಬಸ್ಥರು ತಿಳಿಸಿದರು.

ADVERTISEMENT

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.