
ಪ್ರಜಾವಾಣಿ ವಾರ್ತೆ(ಸಾಂದರ್ಭಿಕ ಚಿತ್ರ)
ಮಡಿಕೇರಿ: ತನ್ನ ತಂದೆಯನ್ನು ಕೊಂದು ಸುಟ್ಟು ಹಾಕಿದ ಆರೋಪದ ಮೇರೆಗೆ ಪ್ರಶಾಂತ್ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬುರೊ ಮುದಿ (65) ಕೊಲೆಯಾದವರು. ಪ್ರಕರಣ ಮುಚ್ಚಿ ಹಾಕಲು ಸಹಕರಿಸಿದ ಆರೋಪದ ಮೇರೆಗೆ ಇತರ 7 ಮಂದಿಯನ್ನೂ ಪೊಲೀಸರು ಬಂಧಿಸಿದ್ದಾರೆ.
‘ಪಶ್ಚಿಮ ಬಂಗಾಳದ ಆರೋಪಿ ಪ್ರಶಾಂತ್ ತಾಲ್ಲೂಕಿನ ಹೊಸ್ಕೇರಿ ಗ್ರಾಮದ ತೋಟವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಭಾನುವಾರ ಜಗಳ ಉಂಟಾಗಿ ದೊಣ್ಣೆಯಿಂದ ಪ್ರಶಾಂತ್ ತನ್ನ ತಂದೆಯನ್ನು ಹೊಡೆದು ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನು ಸುಟ್ಟು ಹಾಕಿದ್ದ. ತೋಟದಲ್ಲಿದ್ದ ಇತರ 7 ಮಂದಿ ಈ ಪ್ರಕರಣವನ್ನು ಮುಚ್ಚಿ ಹಾಕಲು ಸಹಕಾರ ನೀಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.