ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರಗಳ ಕೊರತೆ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ರೈತರು ರಸಗೊಬ್ಬರಗಳ ಲಭ್ಯತೆ ಬಗ್ಗೆ ಯಾವುದೇ ಆತಂಕಪಡುವ ಅಗತ್ಯ ಇರುವುದಿಲ್ಲ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ ತಿಳಿಸಿದ್ದಾರೆ.
ಒಟ್ಟು 30,525 ಹೆಕ್ಟೇರ್ ಗುರಿಗೆ ಇಲ್ಲಿಯವರೆಗೆ 5,864 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ, ನಾಟಿ ಕಾರ್ಯ ಪೂರ್ಣಗೊಂಡಿರುತ್ತದೆ.
ಜಿಲ್ಲೆಯ ಕೃಷಿ, ತೋಟಗಾರಿಕೆ ಮತ್ತು ಕಾಫಿ ಬೆಳೆಗಳಿಗೆ 2025 ನೇ ಸಾಲಿನ ಮುಂಗಾರು ಹಂಗಾಮಿಗೆ ಸುಮಾರು 88,677 ಮೆಟ್ರಿಕ್ ಟನ್ ರಸಗೊಬ್ಬರಗಳ ಅವಶ್ಯಕತೆ ಇದೆಯೆಂದು ಅಂದಾಜಿಸಲಾಗಿದೆ. ಏಪ್ರಿಲ್ ಮಾಹೆಯ ಆರಂಭಿಕ ದಾಸ್ತಾನು (ಕಾಪು ದಾಸ್ತಾನು ಸೇರಿ) 35,924 ಮೆಟ್ರಿಕ್ ಟನ್ ಇದ್ದು, ಜುಲೈ 28ರವರೆಗೆ 54,520 ಮೆಟ್ರಿಕ್ ಟನ್ ರಸಗೊಬ್ಬರ ವಿವಿಧ ತಯಾರಕ ಸಂಸ್ಥೆಗಳಿಂದ ಜಿಲ್ಲೆಗೆ ಸರಬರಾಜಾಗಿತದೆ. ಒಟ್ಟು ಇಲ್ಲಿಯವರೆಗೆ 90,444 ಮೆಟ್ರಿಕ್ ಟನ್ ರಸಗೊಬ್ಬರ ಜಿಲ್ಲೆಯ ರೈತರಿಗೆ ಲಭ್ಯವಿದ್ದು, ಸುಮಾರು 60,126 ಮೆಟ್ರಿಕ್ ಟನ್ ರಸಗೊಬ್ಬರವನ್ನು ರೈತರಿಗೆ ವಿತರಣೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.