ಮಡಿಕೇರಿ: ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ -2 ರ ಫೈನಲ್ ಪಂದ್ಯ ಏ. 13ರಂದು ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ನಡುವೆ ನಡೆಯಲಿದೆ.
ಶನಿವಾರ ನಡೆದ ಪಂದ್ಯದಲ್ಲಿ ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ತಂಡವನ್ನು 30 ರನ್‌ಗಳಿಂದ ಮಣಿಸಿದ ಟೀಮ್ ಲಿವರೇಜ್ ಫೈನಲ್‌ಗೆ ಲಗ್ಗೆ ಇಟ್ಟಿತು.
ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಲಿವರೇಜ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 144 ರನ್‌ಗಳನ್ನು ಗಳಿಸಿತು. ಗುರಿಯನ್ನು ಬೆನ್ನಟ್ಟಿದ ಟೀಮ್ ಕೊಡವ ರೈಸಿಂಗ್ ಸ್ಟಾರ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 114 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
ಟೀಮ್ ಲಿವರೇಜ್ ತಂಡದ ಅಂಜಂಡ ಚೇತನ್ ಚಿಣ್ಣಪ್ಪ ಪಂದ್ಯ ಪುರುಷೋತ್ತಮ ಗೌರವಕ್ಕೆ ಪಾತ್ರರಾದರು.
ಏ.13ರಂದು ಬೆಳಿಗ್ಗೆ 11 ಗಂಟೆಗೆ ಪಾಲಿಬೆಟ್ಟದ ಟಾಟಾ ಕಾಫಿ ಮೈದಾನದಲ್ಲಿ ಟೀಮ್ ವೆಸ್ಟರ್ನ್ ಘಾಟ್ ವಾರಿಯರ್ಸ್ ಮತ್ತು ಟೀಮ್ ಲಿವರೇಜ್ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.