ಮಡಿಕೇರಿ: ಗೋಣಿಕೊಪ್ಪಲುವಿನ ಮುಖ್ಯ ರಸ್ತೆಯಲ್ಲಿರುವ ಪೇಂಟ್ಸ್ ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ ಅಗ್ನಿಶಾಮಕಪಡೆ ಬಂದು ಬೆಂಕಿ ನಂದಿಸಲು ಯತ್ನಿಸಿದರೂ ನೀರು ಖಾಲಿಯಾಗಿದೆ. ಬೆಂಕಿ ಧಗಧಗಿಸುತ್ತಿದ್ದು, ಸದ್ಯ ಗ್ರಾಮ ಪಂಚಾಯಿತಿ ನೀರಿನ ವ್ಯವಸ್ಥೆ ಮಾಡುತ್ತಿದೆ. ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹರಡುವ ಭೀತಿ ಮೂಡಿದ್ದು, ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.