ADVERTISEMENT

ಕೊಡಗಿನಲ್ಲಿ ಕೊರೊನಾಗೆ ಮೊದಲ ಬಲಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 1:01 IST
Last Updated 6 ಜುಲೈ 2020, 1:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗಿನಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದರ ಬೆನ್ನಲ್ಲೇ ಸೊಂಕಿತ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದಾರೆ.

ಸೋಮವಾರಪೇಟೆ ತಾಲ್ಲೂಕು ಕುಶಾಲನಗರದ ದಂಡಿನ ಪೇಟೆಯ 58 ವರ್ಷದ ವ್ಯಕ್ತಿ ಮೃತಪಟ್ಟವರು.‌

ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಶನಿವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಕುಶಾಲನಗರ ಖಾಸಗಿ ಆಸ್ಪತ್ರೆಯಿಂದ ಮಡಿಕೇರಿಯ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದೇ ದಿನ ಸಂಜೆ 4.30ಕ್ಕೆ ಅವರು ಮೃತಪಟ್ಟಿದ್ದಾರೆ. ಅವರು 10 ವರ್ಷಗಳಿಂದ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು.

ADVERTISEMENT

ಕೋವಿಡ್‌ ಪರೀಕ್ಷಾ ವರದಿ ಭಾನುವಾರ ಬಂದಿದ್ದು, ಸೋಂಕು ತಗುಲಿರುವುದು ದೃಢವಾಗಿದೆ.

‘ಇದು ಕೊರೊನಾದಿಂದ ಜಿಲ್ಲೆಯಲ್ಲಿ ಮೊದಲ ಸಾವಾಗಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಜನ ಭಯಪಡ ಬಾರದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.