ADVERTISEMENT

ರಾಷ್ಟ್ರಮಟ್ಟದ ಫ್ಲೋರ್‌ಬಾಲ್ ಟೂರ್ನಿ: ಸಿಂಚನಾಗೆ ಬೆಳ್ಳಿ ಪದಕ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 17:03 IST
Last Updated 3 ಜನವರಿ 2019, 17:03 IST
ಶನಿವಾರಸಂತೆಯ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್.ಎ.ಸಿಂಚನಾ ಬೆಳ್ಳಿ ಪದಕ ಪಡೆದಿದ್ದಾರೆ
ಶನಿವಾರಸಂತೆಯ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್.ಎ.ಸಿಂಚನಾ ಬೆಳ್ಳಿ ಪದಕ ಪಡೆದಿದ್ದಾರೆ   

ಶನಿವಾರಸಂತೆ: ಛತ್ತೀಸಗಡದಲ್ಲಿ ಇತ್ತೀಚೆಗೆ ನಡೆದ 64ನೇ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಫ್ಲೋರ್‌ಬಾಲ್‌ ಟೂರ್ನಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ, ಪಟ್ಟಣದ ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಎಸ್.ಎ.ಸಿಂಚನಾ ಬೆಳ್ಳಿ ಪದಕ ಗಳಿಸಿದ್ದಾರೆ.

ಸಿಂಜನಾ ಕರ್ನಾಟಕ ತಂಡದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ್ದರು. ಟೂರ್ನಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಇಲ್ಲಿನ ಭಾರತಿ ವಿದ್ಯಾಸಂಸ್ಥೆಯ ಪಿಯು ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಎಸ್.ಜೆ.ಅಶೋಕ್, ಸುಶೀಲಾ ದಂಪತಿ ಪುತ್ರಿ ಸಿಂಚನಾ.

ADVERTISEMENT

ಸೆಕ್ರೇಡ್ ಹಾರ್ಟ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಥಾಮಸ್, ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಹಾಗೂ ಉಪನ್ಯಾಸಕರು ಸಿಂಚನಾ ಅವರನ್ನು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.