ADVERTISEMENT

ಹುಲಿ ಪತ್ತೆ: ಅರಣ್ಯ ಇಲಾಖೆ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 5:02 IST
Last Updated 17 ಜೂನ್ 2025, 5:02 IST
ಹುಲಿ ಕಾಣಿಸಿಗೊಂಡ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು
ಹುಲಿ ಕಾಣಿಸಿಗೊಂಡ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು   

ಸಿದ್ದಾಪುರ: ಕರಡಿಗೋಡುದಲ್ಲಿ ಭಾನುವಾರ ಹುಲಿ ಕಾಣಿಸಿಗೊಂಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಡಿಗೋಡುವಿನಿಂದ ಇವಾಲ್ವ ಬ್ಯಾಕ್ ರೆಸಾರ್ಟ್ ಮುಖಾಂತರ ಸಿದ್ದಾಪುರಕ್ಕೆ ತೆರಳುವ ರಸ್ತೆಯ ಕಂಬೀರಂಡ ಎಸ್ಟೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಹುಲಿ ಕಾಣಿಸಿಗೊಂಡಿದ್ದು, ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರೊಬ್ಬರು ವಿಡಿಯೊ ಚಿತ್ರೀಕರಣ ಮಾಡಿದ್ದರು. ಸ್ಥಳೀಯ ವಾಟ್ಸಪ್ ಗುಂಪುಗಳಲ್ಲಿ ವಿಡಿಯೊ ಹರಿದಾಡುತ್ತಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕರಡಿಗೋಡಿನ ಕಾಫಿ ತೋಟಗಳಲ್ಲಿ ಕಾರ್ಯಾಚರಣೆ ನಡೆಸಿದರು.

ADVERTISEMENT

ಬಳಿಕ ಮಾತನಾಡಿದ ಅವರು, ಹುಲಿ ಸಂಚರಿಸಿರುವ ಹೆಜ್ಜೆ ಗುರುತು ಪತ್ತೆ ಹಚ್ಚಿದ್ದು, ಹುಲಿಯು ಮತ್ತೆ ಅರಣ್ಯದ ಕಡೆಗೆ ತೆರಳಿದೆ ಎಂದು ಮಾಹಿತಿ ನೀಡಿದರು.

ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಆನೆ ಕಾರ್ಯಪಡೆ ಹಾಗೂ ಆರ್.ಆರ್.ಟಿ ಸಿಬ್ಬಂದಿಗಳು ಹಾಜರಿದ್ದರು.

ಕಾಡಾನೆ, ಕಾಡುಕೋಣಗಳ ಉಪಟಳದಿಂದ ಬೇಸತ್ತಿರುವ ಗ್ರಾಮಸ್ಥರು ಇದೀಗ ಹುಲಿ ಓಡಾಟದಿಂದ ಮತ್ತಷ್ಟು ಭಯಭೀತರಾಗಿದ್ದಾರೆ. ಕಾಡಾನೆಗಳು ಕಾಫಿ ತೋಟದಲ್ಲೇ ಬೀಡು ಬಿಡುತ್ತಿದ್ದು, ಕಾಫಿ ಸೇರಿದಂತೆ ಕೃಷಿ ಫಸಲನ್ನು ನಾಶ ಮಾಡುತ್ತಿದೆ. ಹುಲಿ ಓಡಾಟದಿಂದಾಗಿ ಕಾರ್ಮಿಕರು ಕೂಡ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.