ADVERTISEMENT

ಕೊಡಗು: ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ, ಹುಲಿ ಸೆರೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 16:27 IST
Last Updated 20 ಸೆಪ್ಟೆಂಬರ್ 2022, 16:27 IST
ಸೆರೆಯಾಗಿರುವ ಹುಲಿ
ಸೆರೆಯಾಗಿರುವ ಹುಲಿ   

ಸಿದ್ದಾಪುರ (ಕೊಡಗು ಜಿಲ್ಲೆ): ಇಲ್ಲಿನ ಮಾಲ್ದಾರೆ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಜಾನುವಾರುಗಳನ್ನು ಕೊಂದು ಹಾಕುತ್ತಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದಿದ್ದಾರೆ.

ಸುಮಾರು 13 ವರ್ಷ ವಯಸ್ಸಿನ ಗಂಡು ಹುಲಿ ಇದಾಗಿದ್ದು, ಎರಡು ಬಾರಿ ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಸೆರೆ ಹಿಡಿಯಲಾಯಿತು.

4 ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗತ್ತಿತ್ತು. ಒಮ್ಮೆ ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರವೂ ಹುಲಿ ತಪ್ಪಿಸಿಕೊಂಡಿತ್ತು. ಸದ್ಯ, ಸಿಕ್ಕಿರುವ ಹುಲಿಯ ಕಾಲಿಗೆ ಗಾಯವಾಗಿದ್ದು, ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಚಿಕಿತ್ಸೆಗಾಗಿ ಕಳುಹಿಸಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.