ADVERTISEMENT

ಅರೆಭಾಷೆ ಸಂಶೋಧನಾ ಕೇಂದ್ರದ ಸಲಹಾ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 6:27 IST
Last Updated 13 ಜುಲೈ 2024, 6:27 IST

ಮಡಿಕೇರಿ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಅವರ ಅಧ್ಯಕ್ಷತೆಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರದ ಸಲಹಾ ಸಮಿತಿಯನ್ನು ರಚಿಸಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಮಹಮ್ಮದ್ ಸವಾದ್,  ಶೈಕ್ಷಣಿಕ ಮಂಡಳಿ ಸದಸ್ಯ ಡಾ.ವೈ.ನಾರಾಯಣ, ಮೂಡಬಿದಿರೆಯ ಐಕಳ ಪಾಂಪೆ ಕಾಲೇಜಿನ ಪ್ರಾಂಶುಪಾಲ ಡಾ.ಪುರುಷೋತ್ತಮ ಕರಂಗಲ್ಲು, ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ.ಬಿ.ಕೆ.ಸರೋಜಿನಿ, ಕನಕಮಜಲು ಗ್ರಾಮದ ಲಕ್ಷ್ಮಿನಾರಾಯಣ ಕಜೆಗದ್ದೆ, ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ, ಕೆಎಸ್‍ಎಸ್ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಮಿತ್ರಾ, ಬಂಟ್ವಾಳ ತಾಲ್ಲೂಕಿನ ಬೆಂಜನ ಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ರಸಾಯನಶಾಸ್ತ್ರ ಪ್ರಾಧ್ಯಪಕ ಡಾ.ದಾಮೋದರ ನಾರಾಲು, ಚೆಂಬು ಗ್ರಾಮದ ಸ್ಮಿತಾ ಅಮೃತರಾಜ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಇದರು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಧಿಕಾರಿ ಅವರು ಕಾಯಂ ಸದಸ್ಯರಾಗಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಅರೆಭಾಷೆ ಸಂಶೋಧನಾ ಕೇಂದ್ರದ ಸಂಯೋಜಕರು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.