ADVERTISEMENT

ಕೊಡಗು ಜಿಲ್ಲೆಯ ದೇಗುಲಗಳಲ್ಲಿ ಗಂಟೆ ಕಳವು ಮಾಡುತ್ತಿದ್ದ ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 10 ಜನವರಿ 2023, 7:08 IST
Last Updated 10 ಜನವರಿ 2023, 7:08 IST
   

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಗಂಟೆಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಅವರಿಂದ 750 ಕೆ.ಜಿ ತೂಕದ ವಿವಿಧ ಮಾದರಿಗಳ, ವಿವಿಧ ಲೋಹಗಳ ಗಂಟೆಗಳನ್ನು ವಶಪಡಿಸಿಕೊಂಡಿದ್ದಾರೆ.

'ಮೈಸೂರಿನ ಕೆಸರೆ ನಿವಾಸಿಗಳಾದ ಒಂದೇ ಕುಟುಂಬಕ್ಕೆ ಸೇರಿದ ಅಮ್ಜದ್ ಅಹಮ್ಮದ್ (37), ಸಮೀವುಲ್ಲಾ (22), ಜುಲ್ಫಿಕರ್ (36) ಹಾಗೂ ಹೈದರ್ (36) ಅವರನ್ನು ಬಂಧಿಸಲಾಗಿದೆ. ಆರೋಪಿಗಳು ಕೊಡಗು, ಮೈಸೂರು, ಹಾಸ‌ನ ಜಿಲ್ಲೆಗಳಲ್ಲಿ ಜನವಸತಿಯಿಂದ ದೂರ ಇರುವ ದೇಗುಲಗಳ ಗಂಟೆಗಳನ್ನು ಕಳವು ಮಾಡುತ್ತಿದ್ದರು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT