ಸೋಮವಾರಪೇಟೆ: ಸಮಾಜದಲ್ಲಿ ಹೆಚ್ಚಿನವರು ಬಿಡುವಿಲ್ಲದ ಕೆಲಸದ ನಡುವೆ, ಆರೋಗ್ಯ ಮತ್ತು ಆಹಾರದ ಬಗ್ಗೆ ಹೆಚ್ಚಿನ ಒತ್ತು ನೀಡಲು ಮುಂದಾಗದಿರುವುದರಿಂದ ಹೆಚ್ಚಿನವರು ಆರೋಗ್ಯವಂತ ಜೀವನ ನಡೆಸಲು ವಿಫಲರಾಗಿದ್ದಾರೆ ಎಂದು ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು.
ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ, ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘ ಹಾಗೂ ಕಂಪಾನಿಯೋ ಸಹಯೋಗದಲ್ಲಿ ಬುಧವಾರ ವಾಹನ ಚಾಲಕರು ಮತ್ತು ಮೋಟಾರು ಮೋಟಾರು ಕೆಲಸಗಾರರ ಸಂಘದ ಸಭಾಂಗಣದಲ್ಲಿ ನಡೆದ ಸಾರ್ವಜನಿಕರಿಗೆ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದು.
‘ಜನರ ಜೀವನ ಶೈಲಿ ಬದಲಾದಂತೆ, ಆರೋಗ್ಯದ ಸಮಸ್ಯೆ ಹೆಚ್ಚಾಗುತ್ತಿದೆ. ಉತ್ತಮ ಆಹಾರ, ವ್ಯಾಯಾಮದಿಂದ ಹಿಂದೆ ಸರಿಯುತ್ತಿದ್ದು, ಸಿದ್ಧ ಆಹಾರಗಳತ್ತ ಯುವಜನರ ಒಲವು ಹೆಚ್ಚಾಗುತ್ತಿದೆ. ಆರೋಗ್ಯದಿಂದಿರಲು ದಿನಂಪ್ರತಿ ಸ್ವಲ್ಪ ಸಮಯವನ್ನಾದರೂ ವ್ಯಾಯಾಮಕ್ಕೆ ಮೀಸಲಿಡಬೇಕು’ ಎಂದರು.
ಕಂಪಾನಿಯೋ ಸಂಸ್ಥೆಯ ವ್ಯವಸ್ಥಾಪಕ ಶಶಿಕಾಂತ್ ಪೂಜಾರಿ ಮಾತನಾಡಿ, ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡಲು ಫೂಟ್ ಥೆರಪಿ ಬಹಳ ಉಪಯುಕ್ತವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಆರ್. ಹರೀಶ್ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ವಾಹನ ಚಾಲಕರು ಮತ್ತು ಮೋಟಾರು ಮೋಟಾರು ಕೆಲಸಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಗೌರವಾಧ್ಯಕ್ಷ ಕೆ.ಜಿ. ಸುರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.