ADVERTISEMENT

ಮಾರ್ಚ್‌ 14ರಂದು ‘ಸೂಪರ್‌ ಟೆನ್‌’ ಪರೀಕ್ಷೆ

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2020, 13:26 IST
Last Updated 5 ಫೆಬ್ರುವರಿ 2020, 13:26 IST

ಮಡಿಕೇರಿ: ‘ಟ್ರೈಕಲರ್ ಅಕಾಡೆಮಿ ಹಾಗೂ ಕೃಷಿಕ್ ಸರ್ವೋದಯ ಫೌಂಡೇಶನ್ ಆಶ್ರಯದಲ್ಲಿ ಮಾರ್ಚ್‌ 14ರಂದು ಜಿಲ್ಲೆಯ ಕಾಲೇಜುಗಳಲ್ಲಿ ‘ಸೂಪರ್ ಟೆನ್‌’ ಮುಕ್ತ ಪ್ರವೇಶ ಪರೀಕ್ಷೆ ನಡೆಯಲಿದೆ’ ಎಂದು ಫೌಂಡೇಶನ್ ಅಧ್ಯಕ್ಷ ಯಾಲದಾಳು ಮನೋಜ್ ಬೋಪಯ್ಯ ಮಾಹಿತಿ ನೀಡಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ತಯಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಮುಕ್ತ ಪ್ರವೇಶ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ವಿವರಿಸಿದರು.

‘ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳಿಗೆ 6 ತಿಂಗಳು ಅಥವಾ ಹೆಚ್ಚಿನ ಅವಧಿಗೆ ಉಚಿತ ತರಬೇತಿ ನೀಡಲಾಗುವುದು. ಬ್ಯಾಂಕಿಂಗ್ ವಿಮೆ, ರೈಲ್ವೆ, ಪಿಎಸ್‌ಐ ಸೇರಿದಂತೆ ಇತರ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸುವುದೇ ಇದರ ಉದ್ದೇಶ’ ಎಂದು ಮಾಹಿತಿ ನೀಡಿದರು.

ADVERTISEMENT

ಗ್ರಾಮೀಣ ಭಾಗದ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಅವರಿಗೆ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ಸಲಹೆ, ಸೂಚನೆ ಹಾಗೂ ವೃತ್ತಿ ಜೀವನಕ್ಕಾಗಿ ಇಂತಹ ಪರೀಕ್ಷೆಗಳಿಗೆ ತಯಾರಾಗಲು ಪ್ರೇರೇಪಿಸಲಾಗುವುದು ಎಂದು ಮಾಹಿತಿ ನೀಡಿದರು.

ನೋಂದಣಿ ಉಚಿತ. ಆಯಾ ಕಾಲೇಜಿನ ಪ್ರಾಂಶುಪಾಲರಿಂದ ಅರ್ಜಿ ಪಡೆದುಕೊಳ್ಳಬಹುದು. ಮಾಹಿತಿಗೆ ಮೊ: 80739 96790 ಸಂಪರ್ಕಿಸಬಹುದು ಎಂದು ತಿಳಿಸಿದರು.

ಅಕಾಡೆಮಿಯ ಆಡಳಿತಾಧಿಕಾರಿ ಸ್ಟೆಫಿ ಸಿ. ಕ್ಸೇವಿಯರ್ ಮಾತನಾಡಿ, ಟಾಪ್ 10 ಅಭ್ಯರ್ಥಿಗಳಿಗೆ ಮಡಿಕೇರಿಯಲ್ಲಿ ಉಚಿತ ಪರೀಕ್ಷಾ ತಯಾರಿ ತರಬೇತಿ ನೀಡಲಾಗುವುದು. ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸಲು ಕಾಲೇಜಿನ ಪ್ರಾಂಶುಪಾಲರು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಉಪಾಧ್ಯಕ್ಷ ಅಂಬೇಕಲ್ ನವೀನ್, ಅಕಾಡೆಮಿಯ ನಿರ್ದೇಶಕರಾದ ಮೋಕ್ಷಿತಾ ಪಟೇಲ್, ರಕ್ಷಿತ್, ಗೌರವ್ ಪಟೇಲ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.