
ಫಲಪುಷ್ಪ ಪ್ರದರ್ಶನ (ಪ್ರಾತಿನಿಧಿಕ ಚಿತ್ರ)
ಮಡಿಕೇರಿ: ಇಲ್ಲಿನ ರಾಜಾಸೀಟ್ ಉದ್ಯಾನದಲ್ಲಿ ಜನವರಿ ಅಥವಾ ಫೆಬ್ರುವರಿಯಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಡೆಸಿದ ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ ಅವರು ಈ ಮಾಹಿತಿ ನೀಡಿದರು.
ರಾಜಾಸೀಟಿನಲ್ಲಿ ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಮತ್ತಿತರ ಸಂಬಂಧ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ರಾಜಾಸೀಟಿನಲ್ಲಿ ಜಿಪ್‍ಲೈನ್ ನಿರ್ವಹಣೆಯನ್ನು ಕನ್ನಡ ಭಾಷೆ ಬರದಿರುವವರು ನಡೆಸುತ್ತಿದ್ದು, ಈ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಜನರ ಜೊತೆ ಸಂವಾದ ನಡೆಸುವವರನ್ನು ನಿಯೋಜಿಸುವಂತೆ ಸಲಹೆ ನೀಡಿದರು.
ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಮಾತನಾಡಿ, ‘ರಾಜಾಸೀಟಿನಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಂದಾಜು ಪಟ್ಟಿ ತಯಾರಿಸಲಾಗಿದೆ’ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ನಿತಿನ್ ಚಕ್ಕಿ, ನಗರಸಭೆ ಪೌರಾಯುಕ್ತ ಎಚ್.ಆರ್.ರಮೇಶ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪಣೀಂದ್ರ, ಸಹಾಯಕ ನಿರ್ದೇಶಕ ಮುತ್ತಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.