ADVERTISEMENT

ಕುಶಾಲನಗರ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2026, 6:37 IST
Last Updated 15 ಫೆಬ್ರುವರಿ 2026, 6:37 IST
   

ಕುಶಾಲನಗರ: ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್‌ ವಸತಿ ಗೃಹಗಳನ್ನು ಉದ್ಘಾಟಿಸಲು ಕೊಡಗಿಗೆ ಭಾನುವಾರ ಬಂದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಕುಶಾಲನಗರ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಸ್ವಾಗತ ಕೋರಲಾಯಿತು.

ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಜೆಸಿಬಿ ಮೇಲಿಂದ ಹೂಮಳೆಗೆರೆದು ಬರಮಾಡಿಕೊಳ್ಳಲಾಯಿತು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಧರ್ಮಜ ಉತ್ತಪ್ಪ, ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ADVERTISEMENT

ನಂತರ ಅವರು ಸುಂಟಿಕೊಪ್ಪಕ್ಕೆ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.