ADVERTISEMENT

ಸೇವೆ ಮಾಡಲು ಅವಕಾಶ ಕೊಡಿ: ಯದುವೀರ

ಬಿಜೆಪಿ ಚುನಾವಣಾ ಪ್ರಚಾರ ಸಭೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2024, 5:34 IST
Last Updated 8 ಏಪ್ರಿಲ್ 2024, 5:34 IST
ಗೋಣಿಕೊಪ್ಪಲು ಬಳಿಯ ಪೊನ್ನಂಪೇಟೆ ಬಸ್ ನಿಲ್ದಾಣದಲ್ಲಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿದರು. ರವಿ ಕಾಳಪ್ಪ ಪಾಲ್ಗೊಡಿದ್ದರು.
ಗೋಣಿಕೊಪ್ಪಲು ಬಳಿಯ ಪೊನ್ನಂಪೇಟೆ ಬಸ್ ನಿಲ್ದಾಣದಲ್ಲಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿದರು. ರವಿ ಕಾಳಪ್ಪ ಪಾಲ್ಗೊಡಿದ್ದರು.   

ಗೋಣಿಕೊಪ್ಪಲು: ‘ಜೀವನದಿ ಕಾವೇರಿ ಉಗಮ ಸ್ಥಳ ಕೊಡಗಿನಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರಕಿದ್ದು ಪುಣ್ಯ ಎಂದು ಭಾವಿಸಿದ್ದೇನೆ’ ಎಂದು ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಪೊನ್ನಂಪೇಟೆ ಹಾಗೂ ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ಭಾನುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ನರೇಂದ್ರಮೋದಿ ಆಶೀರ್ವಾದದಿಂದ ನನಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರಕಿದೆ. ಚುನಾವಣೆಯಲ್ಲಿ ಮತ ನೀಡಿ ಗೆಲ್ಲಿಸಿದರೆ ನಿಮ್ಮೆಲ್ಲರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

‘ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಯೋಜನೆಗಳ ಮೂಲಕ ದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಹಿಂದೆಂದೂ ನಡೆಯದ ಹಲವು ಜನಪರ ಕಾರ್ಯಕ್ರಮಗಳು ಮೋದಿ ಅವಧಿಯಲ್ಲಿ ಆಗಿದೆ. ದೇಶದ ಪ್ರಗತಿ ಹಾಗೂ ಉಳಿವಿಗಾಗಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮತ್ತೊಮ್ಮೆ ಪ್ರಧಾನಿಯಾಗಿ ಮೋದಿ ಅವರನ್ನು  ಆಯ್ಕೆ ಮಾಡುವುದು ಅನಿವಾರ್ಯವಾಗಿದೆ. ಈ ಕಾರಣಕ್ಕೆ ನನಗೆ ಮತ ನೀಡಿ ಹೆಚ್ಚಿನ ಬಹುಮತದಿಂದ ಆರಿಸಿ ಕಳುಹಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ,‘ಐದುನೂರು ವರ್ಷಗಳ ದೇಶದ ಜನತೆ ಕನಸಾದ ರಾಮಮಂದಿರ ನಿರ್ಮಾಣ ನರೇಂದ್ರ ಮೋದಿ ಸಾಕಾರಗೊಳಿಸಿದ್ದಾರೆ. ಇದೇ ಅಲ್ಲದೆ ದೇಶವನ್ನು ಕೇವಲ 10 ವರ್ಷಗಳ ಅವಧಿಯಲ್ಲಿ ಪ್ರಗತಿ ಪಥದತ್ತ ಕೊಂಡೊಯ್ದ‌ಿದ್ದಾರೆ. ಇದನ್ನೆಲ್ಲಾ ಗಮನಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲ ಪಡಿಸಲು ಯದುವೀರ ಅವರಿಗೆ ಮತನೀಡಬೇಕು’ ಎಂದು ಕೋರಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರವಿಕಾಳಪ್ಪ, ತಾಲ್ಲೂಕು ಅಧ್ಯಕ್ಷ ಸುವಿನ್ ಗಣಪತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಮುಖಂಡರಾದ ರೀನಾ ಪ್ರಕಾಶ್, ಪದ್ಮಿನಿ ಪೊನ್ನಪ್ಪ ಯಮುನಾ ಚೆಂಗಪ್ಪ, ಕವಿತಾ, ಮುದ್ದಿಯಾಡ ಮಂಜು, ಅಡ್ಡಂಡ ನೀಲನ್, ಮಧುಕುಮಾರ್, ಶಾಮ್ ಪೂಣಚ್ಚ,ಮಾಚಿಮಾಡ ರವೀಂದ್ರ, ಆಲೆಮಾಡ ಸುದಿ, ಕೋಟೆರ ಕಿಶನ್, ದಶಮಿ ಸದಾ, ಕಬೀರ್ ದಾಸ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.