ADVERTISEMENT

ಡಿ. 29, 30ರಂದು ಮಡಿಕೇರಿಯಲ್ಲಿ ವಿಶ್ವ ಕೊಡವ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2023, 4:40 IST
Last Updated 24 ನವೆಂಬರ್ 2023, 4:40 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಡಿಕೇರಿ: ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ಡಿ. 29 ಮತ್ತು 30ರಂದು ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಕೊಡವ ಸಮ್ಮೇಳನ ಏರ್ಪಡಿಸಿದೆ.

‘ಒಟ್ಟು 1,016 ಕೊಡವ ಕುಟುಂಬಗಳನ್ನು ಗುರುತಿಸಲಾಗಿದೆ. ಇವರಲ್ಲಿ ಬಹುತೇಕ ಮಂದಿ ವಿಶ್ವದ ಬೇರೆ ಬೇರೆ ರಾಷ್ಟ್ರಗಳಲ್ಲಿದ್ದಾರೆ. ಇವರನ್ನೆಲ್ಲ ಒಂದೇ ವೇದಿಕೆಯಲ್ಲಿ ತರುವ ಪ್ರಯತ್ನ ಇದಾಗಿದೆ. 15ಸಾವಿರದಿಂದ 20ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ’ ಎಂದು ಟ್ರಸ್ಟ್‌ನ ಅಧ್ಯಕ್ಷ ಶಾಂತೆಯಂಡ ನಿರನ್ ನಾಚಪ್ಪ ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

‘ಕೊಡವ ಸಂಸ್ಕೃತಿ ಮತ್ತು ಪರಂಪರೆ ಉಳಿಸಿ–ಬೆಳೆಸುವ ಕುರಿತು ಜಾಗೃತಿ ಮೂಡಿಸಲಾಗುವುದು. ಕೋವಿಯ ಹಕ್ಕಿನಂತಹ ವಿಚಾರಗಳ ಚರ್ಚೆ ನಡೆಸಲಾಗುವುದು’ ಎಂದು ಹೇಳಿದರು.

ಟ್ರಸ್ಟ್‌ನ ನಿರ್ದೇಶಕರಾದ ಬೊಳ್ಳೇರ ಪೃಥ್ವಿ ಪೂಣಚ್ಚ ಹಾಗೂ ಪಾಲೆಂಗಡ ಅಮಿತ್ ಭೀಮಯ್ಯ ಮಾತನಾಡಿದರು.

ನಿರ್ದೇಶಕರಾದ ಅಚ್ಚಂಡೀರ ಕುಶಾಲಪ್ಪ, ಪಟ್ರಪಂಡ ಪಂತ್ ಮೊಣ್ಣಪ್ಪ, ಒಡಿಯಂಡ ನವೀನ್ ತಿಮ್ಮಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.