ಗೋಣಿಕೊಪ್ಪಲು: ಇಲ್ಲಿನ ದಸರಾ ಬಹುಭಾಷಾ ಕವಿಗೋಷ್ಠಿ ಸೆ.26ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮೈದಾನದ ದಸರಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಹೇಳಿದರು.
ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ತ ಆಶ್ರಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಯರವ, ಕುಂಬಾರ, ಹಿಂದಿ, ತಮಿಳು, ಮಲೆಯಾಳಂ, ಮರಾಠಿ, ಕುಂದಾಪುರ ಕನ್ನಡ, ಇಂಗ್ಲಿಷ್ 14 ಭಾಷೆಯ 103 ಕವಿಗಳು ಕವಿತೆವಾಚಿಸಲಿದ್ದಾರೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇವುಗಳ ಜತೆಗೆ ಕನ್ನಡ ಭಾಷೆಯ 4 ಚುಟುಕು ಕವಿಗಳು ಚಟುಕು ಕವನ ವಾಚಿಸಲಿದ್ದಾರೆ. ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲಿ್ಕೂ ಜತೆಗೆ ಅವರಲ್ಲಿ ಸಾಹಿತ್ಯಾಸಕ್ತಿ ಮೂಡಿಸುವ ಸಲುವಾಗಿ ಈ ಬಾರಿ ವಿಶೇಷವಾಗಿ 11 ಮಕ್ಕಳ ಕವಿತೆ ವಾಚನಕ್ಕೂ ಅವಕಾಶ ನೀಡಲಾಗಿದೆ. 6ರಿಂದ 13 ವರ್ಷದೊಳಗಿನ ಮಕ್ಕಳಲ್ಲಿ 6 ಜನ ಕನ್ನಡದಲ್ಲಿ 5 ಜನ ಇಂಗ್ಲಿಷ್ ನಲ್ಲಿ ಕವಿತೆ ವಾಚಿಸಲಿದ್ದಾರೆ ಎಂದು ಹೇಳಿದರು.
ಕವಿಗೋಷ್ಠಿಗೆ ಆಗಮಿಸುವ ಎಲ್ಲಾ ಕವಿಗಳಿಗೂ ಗೌರವ ಸಂಭಾವನೆ ಮತ್ತು ಕೊಡಗಿನ ಲೇಖಕರ ಒಂದು ಪುಸ್ತಕವನ್ನು ಕೊಡುಗೆಯಾಗಿ ನೀಡಲಾಗುವುದು. ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಸುಳ್ಯ, ಬೆಳಗಾವಿ, ಮೈಸೂರು,ಕುಂದಾಪುರ ಹೀಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕವಿಗಳು ಆಗಮಿಸಲಿದ್ದಾರೆ. ಪೊನ್ನಂಪೇಟೆ ಕಿಗ್ಗಟ್ಟುನಾಡು ಹಿರಿಯ ನಾಗರಿಕ ವೇದಿಕೆ ಸ್ಥಾಪಕ ಅಧ್ಯಕ್ಷ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಗೋಷ್ಠಿ ಉದ್ಘಾಟಿಸಲಿದ್ದಾರೆ.ಸಾಹಿತಿ ಸುಬ್ರಾಯ ಸಂಪಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮುಲ್ಲೆಂಗಡ ಮುಧೋಷ್ ಪೂವಯ್ಯ ಮುಖ್ಯ ಅತಿಥಿಗಳಾಗಿರುವರು ಎಂದು ಹೇಳಿದರು.
ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಕವಿಗೋಷ್ಠಿ ಸಂಚಾಲಕಿ ಎಸ್.ಎಂ.ರಜನಿ, ಗೌರವ ಕಾರ್ಯದರ್ಶಿ, ಶೀಲಾ ಬೋಪಣ್ಣ, ಕಾವೇರಿ ದಸರಾ ಸಮಿತಿಯ ಪ್ರಧಾನ ಕಾರ್ಯರ್ಧಿ ಕಂದಾದೇವಯ್ಯ, ಸಂಯೋಜಕ ಚಂದನ್ ಕಾಮತ್ ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.