ಗೋಣಿಕೊಪ್ಪಲು: ಇಲ್ಲಿನ ದಸರಾ ಜನೋತ್ಸವದ ಮಹಿಳಾ ದಸರಾ ಸೆ.6ರಂದು ಬೆಳಿಗ್ಗೆ 10ಕ್ಕೆ ದಸರಾ ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದ್ದು, ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
‘ಹಗ್ಗ ಜಗ್ಗಾಟ, ರಂಗೋಲಿ ಸ್ಪರ್ಧೆ, ಬಾಲ್ ಇನ್ ದ ಬಾಸ್ಕೆಟ್, ಕೈಕಟ್ಟಿ ಸೇಬನ್ನು ತಿನ್ನುವ ಸ್ಪರ್ಧೆ ನಡೆಯಲಿವೆ. ಸಾಂಸ್ಕೃತಿಕ ವಿಭಾಗದಲ್ಲಿ ಜಾನಪದ ಗೀತೆ, ಸಾಮೂಹಿಕ ನೃತ್ಯ, ಫ್ಯಾಶನ್ ಶೋ ಮೊದಲಾದ ಸ್ಪರ್ಧೆಗಳು ನಡೆಯಲಿವೆ’ ಎಂದು ಮಹಿಳಾ ದಸರಾದ ಅಧ್ಯಕ್ಷೆ ಮಂಜುಳಾ, ಕಾವೇರಿ ದಸರಾ ಸಮಿತಿ ಅಧ್ಯಕ್ಷ ಪ್ರಮೋದ್ ಗಣಪತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.