ADVERTISEMENT

ಸೋಮವಾರಪೇಟೆ |ಹಾಕಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ

​ಪ್ರಜಾವಾಣಿ ವಾರ್ತೆ
Published 11 ಮೇ 2025, 14:22 IST
Last Updated 11 ಮೇ 2025, 14:22 IST
ಸೋಮವಾರಪೇಟೆ ಟರ್ಫ್ ಮೈದಾನದಲ್ಲಿ ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ನೀಡುತ್ತಿರುವ ಹಾಕಿ ಬೇಸಿಗೆ ಶಿಬಿರಕ್ಕೆ ಭಾನುವಾರ ಅಂತರರಾಷ್ಟ್ರೀಯ ಹಾಕಿಪಟು ಎಸ್.ವಿ. ಸುನೀಲ್ ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು
ಸೋಮವಾರಪೇಟೆ ಟರ್ಫ್ ಮೈದಾನದಲ್ಲಿ ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ನೀಡುತ್ತಿರುವ ಹಾಕಿ ಬೇಸಿಗೆ ಶಿಬಿರಕ್ಕೆ ಭಾನುವಾರ ಅಂತರರಾಷ್ಟ್ರೀಯ ಹಾಕಿಪಟು ಎಸ್.ವಿ. ಸುನೀಲ್ ಭೇಟಿ ನೀಡಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು   

ಸೋಮವಾರಪೇಟೆ: ‘ಯಾವುದೇ ಸಾಧನೆ ಮಾಡಬೇಕೆಂದರೆ, ಅದಕ್ಕೆ ಶತತ ಪರಿಶ್ರಮ ಇದ್ದಲ್ಲಿ ಮಾತ್ರ ಸಾಧ್ಯವಿದ್ದು, ಎಲ್ಲರೂ ತಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಸಾಧಿಸಿ ತೋರಿಸಬೇಕು’ ಎಂದು ಅಂತರರಾಷ್ಟ್ರೀಯ ಹಾಕಿಪಟು ಎಸ್.ವಿ.ಸುನೀಲ್ ತಿಳಿಸಿದರು.

ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ಇಲ್ಲಿನ ಟರ್ಫ್ ಮೈದಾನದಲ್ಲಿ ನೀಡುತ್ತಿರುವ ಹಾಕಿ ಬೇಸಿಗೆ ಶಿಬಿರದಲ್ಲಿ ಭಾನುವಾರ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಮಾತನಾಡಿದರು.

‘ಇಲ್ಲಿನ ಮೈದಾನದಲ್ಲಿ ಆಟವಾಡಿದ ಸಾಕಷ್ಟು ಆಟಗಾರರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಎಲ್ಲರೂ ತಮ್ಮ ಅಲ್ಪ ಸಮಯವನ್ನು ಕ್ರೀಡೆಗಾಗಿ ಮೀಸಲಿಟ್ಟಲ್ಲಿ ಮುಂದಿನ ಜೀವನ ರೂಪಿಸಿಕೊಳ್ಳಲು ಅವಕಾಶವಾಗುವುದು’ ಎಂದು ತಿಳಿಸಿದರು.

ADVERTISEMENT

ಈ ಸಂದರ್ಭ ಡಾಲ್ಫಿನ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಂ.ಇ.ಮಹೇಶ್, ಗೌರವಾಧ್ಯಕ್ಷ ಎಚ್.ಎನ್. ಅಶೋಕ, ಖಜಾಂಚಿ ಕೆ.ಜೆ. ಗಿರೀಶ್, ಸಹಕಾರ್ಯದರ್ಶಿ ಮಹೇಶ್, ಸದಸ್ಯ ವಿನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.