ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಭಾರಿ ಮಳೆ ಸೋಮವಾರವೂ ಮುಂದುವರಿದಿದೆ. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರತೊಡಗಿದೆ.
ಸೋಮವಾರ ಸಂಜೆ 10 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು, ನದಿ ದಂಡೆಯ ನಿವಾಸಿಗಳು ಎಚ್ಚರ ವಹಿಸುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚಿಸಿದ್ದಾರೆ.
ಜೋರು ಗಾಳಿ ಮತ್ತು ಧಾರಾಕಾರ ಮಳೆ ಮುಂದುವರಿದಿದೆ. ಮಳೆಯಿಂದ ಬಾಡಗ ಬಾಣಂಗಾಲ ಗ್ರಾಮದ ಪಿ.ಕೆ.ಆಮಿನ ಎಂಬುವವರ ಮನೆಯ ಗೋಡೆ ಹಾಗೂ ಚಾವಣಿ ಕುಸಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.