ADVERTISEMENT

ಹಾರಂಗಿ‌: ಒಳಹರಿವು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 3:58 IST
Last Updated 20 ಸೆಪ್ಟೆಂಬರ್ 2020, 3:58 IST
ಕುಶಾಲನಗರ ಸಮೀಪದ ಹಾರಂಗಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿದ್ದು,ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಕುಶಾಲನಗರ ಸಮೀಪದ ಹಾರಂಗಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿದ್ದು,ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.   

ಕುಶಾಲನಗರ: ಸಮೀಪದ ಹಾರಂಗಿ‌ ಜಲಾನಯನ ಪ್ರದೇಶದಲ್ಲಿ ಮಳೆ ಬಿರುಸುಗೊಂಡಿದ್ದು, ಶನಿವಾರ ಜಲಾಶಯಕ್ಕೆ 2,981 ಕ್ಯುಸೆಕ್‌ ನೀರಿನ ಒಳಹರಿವು ದಾಖಲಾಯಿತು.

ಜಿಲ್ಲೆಯ ವಿವಿಧೆಡೆ ಮಳೆ ಮತ್ತೆ ಚುರುಕುಗೊಂಡಿದ್ದು, ಬೆಳಿಗ್ಗೆಯಿಂದ ಬಿಡುವು ನೀಡದೇ ಸುರಿಯಿತು. ಇದರೊಂದಿಗೆ ಕೃಷಿ ಚಟುವಟಿಕೆಗಳು ಸಹ ಚುರುಕುಗೊಂಡಿವೆ.

2,859 ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಶನಿವಾರ ಬೆಳಿಗ್ಗೆ 2,858.65 ಅಡಿ ನೀರು ಸಂಗ್ರಹಗೊಂಡಿತು. 2,981 ಕ್ಯುಸೆಕ್‌ ಒಳಹರಿವು ಇತ್ತು. 8.5 ಟಿಎಂಸಿ ಸಾಮರ್ಥ್ಯದಲ್ಲಿ 8.38 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಲ್ಲಿ ನದಿಗೆ 800 ಕ್ಯುಸೆಕ್‌ ಹಾಗೂ ನಾಲೆಗೆ 700 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ ಎಂದು ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.