ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿ ಜಲಾಶಯ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಹಾರಂಗಿ ಜಲಾಶಯಕ್ಕೆ 35 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಇದರಿಂದ 25 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಧಾರಾಕಾರ ಮಳೆ ಮುಂದುವರಿದಿರುವುದರಿಂದ ನದಿಗೆ ಬಿಡುವ ನೀರಿನ ಪ್ರಮಾಣವನ್ನು ಹಂತಹಂತವಾಗಿ ಹೆಚ್ಚಿಸಲಾಗುತ್ತದೆ.
ಹೀಗಾಗಿ, ನದಿ ದಂಡೆಯಲ್ಲಿ ವಾಸಿಸುವವರು ಮುನ್ನಚ್ಚರಿಕೆ ವಹಿಸಬೇಕು ಎಂದು ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.