ADVERTISEMENT

ಕೊಡಗಿನ ಹಲವೆಡೆ ಬಿರುಗಾಳಿ ಸಹಿತ ಮಳೆ; ಬುಡಮೇಲಾದ ಮರಗಳು

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 7:43 IST
Last Updated 26 ಜುಲೈ 2025, 7:43 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ನಿರಂತರವಾಗಿ ಬಿರುಗಾಳಿ ಬೀಸುತ್ತಿದ್ದು, ಭಾರಿ ಮಳೆ ಸುರಿಯುತ್ತಿದೆ.

ಬಿರುಗಾಳಿಗೆ ಸಿಲುಕಿ ಹಲವೆಡೆ ಮರಗಳು ಬುಡಮೇಲಾಗಿವೆ.

ಮಡಿಕೇರಿ -ಸೋಮವಾರಪೇಟೆ ಮಾರ್ಗದ ರಸ್ತೆಯ ಕಾಜೂರು ಬಳಿ ಮರವೊಂದು ರಸ್ತೆಗೆ ಉರುಳಿದೆ. ಭಾಗಮಂಡಲ- ತಲಕಾವೇರಿ ರಸ್ತೆಯಲ್ಲೂ ಮರ ಬಿದ್ದಿದೆ.

ADVERTISEMENT

ಬಹುತೇಕ ಎಲ್ಲೆಡೆ ಬಿರುಗಾಳಿ ತೀವ್ರ ಸ್ವರೂಪ ಪಡೆದುಕೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.