ADVERTISEMENT

ಕೊಡಗಿನಲ್ಲಿ ಮುಂದುವರಿದ ವರ್ಷಧಾರೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2024, 8:58 IST
Last Updated 1 ಆಗಸ್ಟ್ 2024, 8:58 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ರಾತ್ರಿ ಬಿಡುವು ನೀಡಿದ್ದ ಮಳೆ ಗುರುವಾರ ಬೆಳಿಗ್ಗೆಯಿಂದ ಮತ್ತೆ ಆರಂಭವಾಗಿದೆ. ಮಡಿಕೇರಿ ನಗರ ಸೇರಿದಂತೆ ಬಹುತೇಕ ಎಲ್ಲೆಡೆ ಬಿರುಸಿನಿಂದ ಸುರಿಯುತ್ತಿದೆ. ಮಡಿಕೇರಿ ನಗರದಲ್ಲಿ ದಟ್ಟ ಮಂಜಿನೊಂದಿಗೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ನೀಡಲಾಗಿದೆ.

ಸಿದ್ದಾಪುರ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಿಸಿದೆ. ಗುಹ್ಯ ಗ್ರಾಮದ ಕಕ್ಕಟ್ಟುಕಾಡು ವಿಗೆ ತೆರಳುವ ರಸ್ತೆ ಜಲಾವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ. ಕರಡಿಗೋಡು ಗ್ರಾಮಕ್ಕೆ ತೆರಳುವ ರಸ್ತೆಯೂ ಜಲಾವೃತಗೊಂಡಿದೆ. ಕರಡಿಗೋಡು ನದಿ ದಡದ 24 ಕುಟುಂಬಗಳ 76 ಮಂದಿಯನ್ನು ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.

ಹಚ್ಚಿನಾಡು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರ ಆರಂಭಿಸಿದ್ದು, 10 ಕುಟುಂಬದ 44 ಮಂದಿಯನ್ನು ಸ್ಥಳಾಂತರಿಸಲಾಗಿದೆ. ವಿರಾಜಪೇಟೆ ತಹಶೀಲ್ದಾರ್ ರಾಮಚಂದ್ರ, ಅಮ್ಮತ್ತಿ ಕಂದಾಯ ಪರಿವೀಕ್ಷಕ ಅನಿಲ್ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.