ADVERTISEMENT

ಮುಂದುವರಿದ ಮಳೆ, ಗಾಳಿ; ಕಗ್ಗತ್ತಲಿನಲ್ಲಿ ಮಡಿಕೇರಿ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 17:18 IST
Last Updated 4 ಜುಲೈ 2022, 17:18 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ರಾತ್ರಿಯೂ ಮಳೆ ಮುಂದುವರಿದಿದೆ‌. ಗಾಳಿ ಆರ್ಭಟ ಹೆಚ್ಚಾಗಿದ್ದು, ಕುಶಾಲನಗರದಿಂದ ಮಡಿಕೇರಿಗೆ ಬರುವ 66 ಕೆ.ವಿ ಸಾಮರ್ಥ್ಯದ ವಿದ್ಯುತ್ ಲೈನ್‌ ಬಿರುಗಾಳಿಗೆ ಸಿಲುಕಿ ಸೋಮವಾರ ಸಂಜೆ ಹಾನಿಗೀಡಾಯಿತು. ಇದರಿಂದ ಮಡಿಕೇರಿ, ಭಾಗಮಂಡಲ, ಸಂಪಾಜೆ ಸೇರಿದಂತೆ ಬಹತೇಕ ಕಡೆ ವಿದ್ಯುತ್ ಕಡಿತಗೊಂಡಿದೆ.

ಸ್ಥಳಕ್ಕೆ ಧಾವಿಸಿರುವ ಸುಮಾರು 10ಕ್ಕೂ ಹೆಚ್ಚಿನ ಸೆಸ್ಕ್ ಸಿಬ್ಬಂದಿ ದುರಸ್ತಿ ಕಾರ್ಯ ನಡೆಸಿದ್ದಾರೆ. ರಾತ್ರಿ 10 ಗಂಟೆಯವರೆಗೂ ದುರಸ್ತಿ ನಡೆದಿತ್ತು.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸೆಸ್ಕ್‌ನ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್, ‘ಭರದಿಂದ ದುರಸ್ತಿ ಕಾರ್ಯ ನಡೆದಿದೆ. ಒಂದೆರಡು ಗಂಟೆಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದರು.

ADVERTISEMENT

ಆರೆಂಜ್ ಅಲರ್ಟ್ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಿಗ್ಗೆ8.30 ರವರೆಗೆ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರೆಂಜ್ ಅಲರ್ಟ್ ಘೋಷಿಸಿದೆ. ಎನ್ ಡಿ ಆರ್ ಎಫ್ ಕಟ್ಟೆಚ್ಚರ ವಹಿಸಿದೆ‌. ಕಾಳಜಿ ಕೇಂದ್ರ ತೆರೆಯಲು ಚೆಂಬು ಹಾಗೂ ಪೆರಾಜೆಯಲ್ಲಿ ಸಿದ್ದತೆಗಳು ನಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.