ಪ್ರಾತಿನಿಧಿಕ ಚಿತ್ರ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜೋರಾಗಿ ಸುರಿಯುತ್ತಿರುವ ಮಳೆ ಮಂಗಳವಾರವೂ ಮುಂದುವರಿಯಿತು. ನಗರದಲ್ಲಿ ಮಧ್ಯಾಹ್ನ ಒಂದೂವರೆ ಗಂಟೆವರೆಗೆ ಭಾರಿ ಮಳೆ ಬಿದ್ದಿತು. ದಿನವಿಡೀ ಮೋಡ ಕವಿದ ವಾತಾವರಣವಿತ್ತು.
ಮಂಗಳವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಭಾಗಮಂಡಲದಲ್ಲಿ 6, ಮಡಿಕೇರಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 5.5, ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲದಲ್ಲಿ ತಲಾ 4 ಸೆಂ.ಮೀ. ಮಳೆ ಸುರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.