ಪ್ರಾತಿನಿಧಿಕ ಚಿತ್ರ
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ವಿರಾಜಪೇಟೆ ಭಾಗಗಳಲ್ಲಿ ಬುಧವಾರ ಬಿರುಸಿನಿಂದ ಮಳೆ ಸುರಿದಿದೆ. ಇನ್ನುಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.
ಹವಾಮಾನ ಇಲಾಖೆ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದೆ. ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ 7 ಸೆಂ.ಮೀ., ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲದಲ್ಲಿ 6 ಸೆಂ.ಮೀ., ಸೋಮವಾರಪೇಟೆಯಲ್ಲಿ 3 ಸೆಂ.ಮೀ., ಮಡಿಕೇರಿ ತಾಲ್ಲೂಕಿನ ಭಾಗಮಂಡಲ, ಸಂಪಾಜೆ ಮತ್ತು ಸೋಮವಾರಪೇಟೆ ತಾಲ್ಲೂಕಿನ ಶನಿವಾರ ಸಂತೆಯಲ್ಲಿ 2.5 ಸೆಂ.ಮೀ. ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.