
ಪ್ರಜಾವಾಣಿ ವಾರ್ತೆ
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದೆ. ತಲಕಾವೇರಿ, ಚೇರಂಗಾಲ ವ್ಯಾಪ್ತಿಯಲ್ಲಿ ಶನಿವಾರ ಭಾರಿ ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ.
ಮಡಿಕೇರಿ, ನಾಪೋಕ್ಲು, ಸುಂಟಿಕೊಪ್ಪ, ಮಾದಾಪುರದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಕಾವೇರಿ ನದಿಯೂ ಸೇರಿದಂತೆ ಹಳ್ಳ ಕೊಳ್ಳಗಳಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ಹಾರಂಗಿ ಒಳಹರಿವು ಹೆಚ್ಚಳವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.