ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮಂಗಳೂರು ರಸ್ತೆಯ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸಣ್ಣಪ್ರಮಾಣದ ಭೂಕುಸಿತವಾಗಿದ್ದು, 6 ಕುಟುಂಬಗಳನ್ನು ಮುಂಜಾಗ್ರತಾ ಕ್ರಮವಾಗಿ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಮಡಿಕೇರಿ ತಹಶೀಲ್ದಾರ್ ಮಹೇಶ್ ಹಾಗೂ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.