ADVERTISEMENT

ಕೊಡಗಿನಲ್ಲಿ ಹೆಚ್ಚಿದ ಮಳೆ: ‘ರೆಡ್‌ ಅಲರ್ಟ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 14:13 IST
Last Updated 3 ಜುಲೈ 2025, 14:13 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬಿರುಸಿನ ಮಳೆ ಮುಂದುವರಿದಿದೆ. ಹವಾಮಾನ ಇಲಾಖೆಯು ಶುಕ್ರವಾರ (ಜೂನ್ 4) ಬೆಳಿಗ್ಗೆ 8.30ರವರೆಗೂ ‘ರೆಡ್ ಅಲರ್ಟ್’ ಘೋಷಿಸಿದೆ.

ಭಾರಿ ಮಳೆಯಿಂದ ಜಿಲ್ಲೆಯ ಎಲ್ಲ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಡಿಕೇರಿ ನಗರದಲ್ಲಿ  ಬುಧವಾರ ತಡರಾತ್ರಿಯಿಂದ ಗುರುವಾರ ಮಧ್ಯಾಹ್ನದವರೆಗೂ ಮಳೆ ಅಬ್ಬರಿಸಿತು. ಇದರಿಂದ ಹಾರಂಗಿ ಜಲಾಶಯದ ಒಳ ಹರಿವು ಹೆಚ್ಚಾಗಿದ್ದು, ನದಿಗೆ 10ಸಾವಿರ ಕ್ಯುಸೆಕ್‌ ನೀರನ್ನು ಹರಿಸಲಾಯಿತು.  ನಾಪೋಕ್ಲು ಭಾಗದಲ್ಲಿ ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.

ADVERTISEMENT

ಶಾಂತಳ್ಳಿಯಲ್ಲಿ 14 ಸೆಂ.ಮೀ. ಮಳೆಯಾಗಿದೆ. ಭಾಗಮಂಡಲ, ಸೋಮವಾರಪೇಟೆ 8, ಶನಿವಾರಸಂತೆ 6, ಮಡಿಕೇರಿ, ನಾಪೋಕ್ಲು, ಸಂಪಾಜೆ, ವಿರಾಜಪೇಟೆ, ಹುದಿಕೇರಿಯಲ್ಲಿ ತಲಾ 5 ಸೆಂ.ಮೀ. ಮಳೆ ಸುರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.