ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯಿತು
ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಮಂಗಳವಾರ ಬೆಳಿಗ್ಗೆಯಿಂದಲೇ ಬಿರುಸಿನ ಮಳೆ ಸುರಿಯುತ್ತಿದೆ.
ವಿರಾಜಪೇಟೆ, ಸುಂಟಿಕೊಪ್ಪ ಭಾಗಗಳಲ್ಲಿಯೂ ಸಾಧಾರಣ ಮಳೆಯಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕಿನ ಹಲವೆಡೆ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ನಸುಕಿನಿಂದಲೂ ದಟ್ಟ ಮೋಡಗಳು ಹಾಗೂ ಹಿಮ ಕವಿದಿತ್ತು. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮಳೆ ಧಾರಾಕಾರವಾಗಿ ಸುರಿಯುತ್ತಲೇ ಇದೆ.
ಭಾರತೀಯ ಹವಾಮಾನ ಇಲಾಖೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.