ಮಡಿಕೇರಿ: ಕೊಡಗು ಜಿಲ್ಲೆಯ ಎಲ್ಲೆಡೆ ಸೋಮವಾರ ರಾತ್ರಿಯಿಂದ ಮಂಗಳವಾರ ಮಂಗಳವಾರ ಮಧ್ಯಾಹ್ನದವರೆಗೂ ಭಾರಿ ಮಳೆಯಾಗಿದೆ. ಮಂಗಳವಾರವೂ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.
ತಲಕಾವೇರಿ, ಭಾಗಮಂಡಲದಲ್ಲಿ ತ್ರಿವೇಣಿ ಸಂಗಮ ಈ ವರ್ಷ 2ನೇ ಬಾರಿಗೆ ಜಲಾವೃತಗೊಂಡಿತು. ಭಾಗಮಂಡಲ -ಮಡಿಕೇರಿ ರಸ್ತೆ, ನಾಪೋಕ್ಲು - ಭಾಗಮಂಡಲ ರಸ್ತೆಯಲ್ಲಿ ನೀರು ಹರಿಯುತ್ತಿದೆ.
ಬಲಮುರಿಯಲ್ಲಿ ಹೊಳೆ ತುಂಬಿ ಹರಿಯುತ್ತಿದ್ದು, ಸೇತುವೆ ಮುಳುಗಿದೆ. ಮಳೆ ಬಿರುಸುಗೊಂಡಲ್ಲಿ ಮೇಲ್ಭಾಗದ ರಸ್ತೆವರೆಗೆ ಹಾಗೂ ನದಿ ತಟದಲ್ಲಿರುವ ಮನೆಗಳವರೆಗೂ ನೀರು ಬರುವ ಭೀತಿ ಇದೆ. ಭಾಗಮಂಡಲ ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಡುವು ಎಂಬಲ್ಲಿ ಪ್ರವಾಹ ಉಂಟಾಗಿದ್ದು, ಸ್ಥಳೀಯರು ದೋಣಿ ಮೂಲಕ ಸಂಚರಿಸುತ್ತಿದ್ದಾರೆ.
ಹಾರಂಗಿ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, 18 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುತ್ತಿದ್ದು, ನದಿ ಪಾತ್ರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.