ADVERTISEMENT

ಕೊಡಗು ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 11:37 IST
Last Updated 2 ನವೆಂಬರ್ 2020, 11:37 IST
ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ.
ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ.   

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ.

ಮಡಿಕೇರಿ, ಗೋಣಿಕೊಪ್ಪಲು ಸುತ್ತಮುತ್ತ ಜೋರು ಮಳೆಯಾಗಿದೆ. ನಾಪೋಕ್ಲು, ಬೇತು, ಕೈಕಾಡು, ಚೋಣಕೆರೆಯಲ್ಲಿ ಸಾಧಾರಣ ಮಳೆಯಾಗಿದ್ದು ಉಳಿದೆಡೆ ಮೋಡ ಕವಿದ ವಾತಾವರಣವಿತ್ತು.

ಜಿಲ್ಲೆಯಲ್ಲಿ ಅರೇಬಿಕಾ ಕಾಫಿ ಹಣ್ಣಾಗಿದ್ದು ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ಹಣ್ಣು ನೆಲಕ್ಕೆ ಉದುರುವ ಸಾಧ್ಯತೆಯಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.