ADVERTISEMENT

ಕೊಡಗು: ಸುಂಟಿಕೊಪ್ಪದಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 13:04 IST
Last Updated 1 ಅಕ್ಟೋಬರ್ 2019, 13:04 IST
ಸುಂಟಿಕೊಪ್ಪ ಪಟ್ಟಣದಲ್ಲಿ ಮಂಗಳವಾರ ಮದ್ಯಾಹ್ನ ಧಾರಾಕಾರ ಮಳೆ ಸುರಿಯಿತು
ಸುಂಟಿಕೊಪ್ಪ ಪಟ್ಟಣದಲ್ಲಿ ಮಂಗಳವಾರ ಮದ್ಯಾಹ್ನ ಧಾರಾಕಾರ ಮಳೆ ಸುರಿಯಿತು   

ಸುಂಟಿಕೊಪ್ಪ: ಸುಂಟಿಕೊಪ್ಪ ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿಯಿತು.
ಬೆಳಿಗ್ಗೆಯಿಂದ ಉರಿ ಬಿಸಿಲಿನಿಂದ ಕೂಡಿದ್ದ ವಾತಾವರಣ ಮದ್ಯಾಹ್ನ 1ರಿಂದ 3ರ ತನಕ ದಿಢೀರನೇ ಸುರಿಯಲಾರಂಭಿಸಿತು.

ರಭಸದ ಮಳೆಯಿಂದ ಚರಂಡಿಗಳು ತುಂಬಿ ರಸ್ತೆ ತುಂಬೆಲ್ಲ ನೀರು ಹರಿಯಲಾರಂಭಿಸಿತು. ದಿಢೀರನೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತು.

ಕೊಡಗರಹಳ್ಳಿ, ಗದ್ದೆಹಳ್ಳ, ಬಾಳೆಕಾಡು, ಶಾಂತಿಗೇರಿ ಸೇರಿದಂತೆ ಇತರೆಡೆ ರಭಸದ ಮಳೆ ಸುರಿಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.