ADVERTISEMENT

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 11:29 IST
Last Updated 5 ಅಕ್ಟೋಬರ್ 2019, 11:29 IST
   

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಶನಿವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಬೆಳಿಗ್ಗೆಯಿಂದ ಬಿಸಿಲ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ದಿಢೀರ್‌ ಮಳೆ ಸುರಿಯಲು ಆರಂಭಿಸಿತು.

ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಚೆಟ್ಟಿಮಾನಿ, ಅಪ್ಪಂಗಳ, ಕಾಟಕೇರಿ, ಮದೆನಾಡು ವ್ಯಾಪ್ತಿಯಲ್ಲಿ ಉತ್ತಮ ಮಳೆ ಸುರಿದಿದೆ. ಶುಕ್ರವಾರ ರಾತ್ರಿಯು ಜಿಲ್ಲೆಯ ಹಲವೆಡೆ ಮಳೆಯಾಗಿತ್ತು.

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಮಳೆಯಾಗುತ್ತದೆ.

ADVERTISEMENT
ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.