ADVERTISEMENT

ಕೊಡಗಿನಲ್ಲಿ ಮುಂದುವರಿದ ಮಳೆ ಅಬ್ಬರ, ಶಾಲಾ –ಕಾಲೇಜುಗಳಿಗೆ ರಜೆ 

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2019, 5:37 IST
Last Updated 5 ಸೆಪ್ಟೆಂಬರ್ 2019, 5:37 IST
ನಿರಂತರ ಮಳೆಯಿಂದಾಗಿ, ಭಾಗಮಂಡಲ–ಅಯ್ಯಂಗೇರಿ ರಸ್ತೆಯ ಮೇಲೆ ಕಾವೇರಿ ನದಿಯ ನೀರು ಹರಿಯುತ್ತಿರುವ ದೃಶ್ಯ
ನಿರಂತರ ಮಳೆಯಿಂದಾಗಿ, ಭಾಗಮಂಡಲ–ಅಯ್ಯಂಗೇರಿ ರಸ್ತೆಯ ಮೇಲೆ ಕಾವೇರಿ ನದಿಯ ನೀರು ಹರಿಯುತ್ತಿರುವ ದೃಶ್ಯ   

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಗುರುವಾರವೂ ಗಾಳಿ ಸಹಿತ ಮಳೆಯ ಅಬ್ಬರ ಮುಂದುವರಿದಿದೆ. ಬುಧವಾರ ರಾತ್ರಿಯಿಡೀ ಭಾರೀ ಮಳೆ ಸುರಿದಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.

ಲಕ್ಷ್ಮಣತೀರ್ಥ ಹಾಗೂ ಕಾವೇರಿ ನದಿಯಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿದೆ. ಅಲ್ಲಲ್ಲಿ ರಸ್ತೆ ಸಂಪರ್ಕ ಕಡಿತವಾಗಿದೆ.

ಇಂದು (ಗುರುವಾರ) ರೆಡ್ ಅಲರ್ಟ್ ಇದ್ದು, ಶಾಲಾ- ಕಾಲೇಜಿಗೆ ರಜೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.