
ಪ್ರಜಾವಾಣಿ ವಾರ್ತೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 15ರಂದು ರಜೆ ಘೋಷಿಸಲಾಗಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೆ.ಮಂಜುಳಾ ತಿಳಿಸಿದ್ದಾರೆ.
ತೀವ್ರಗತಿಯಲ್ಲಿ ಬೀಸುತ್ತಿರುವ ಗಾಳಿ, ಹಲವೆಡೆ ಮರಗಳು ಧರೆಗೆ
ಮಡಿಕೇರಿ ನಗರದಲ್ಲಿ ಗಾಳಿಯ ವೇಗ ಭಾನುವಾರ ರಾತ್ರಿ ತೀವ್ರಗತಿಯನ್ನು ಪಡೆದುಕೊಂಡಿದೆ.
ಭಾರಿ ಮಳೆಯ ಜೊತೆಗೆ ಬೀಸುತ್ತಿರುವ ಜೋರುಗಾಳಿಯು ಹಲವೆಡೆ ಮರಗಳನ್ನು ಧರೆಗುರುಳಿಸಿದೆ. ನಗರದಲ್ಲಿ ವಿದ್ಯುತ್ ಕಡಿತಗೊಂಡಿದೆ.
ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಮರಗಳು ರಸ್ತೆಗೆ ಉರುಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.