ಸೋಮವಾರಪೇಟೆ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
ನಿರಂತರ ಮಳೆ ಸುರಿಯುತ್ತಿರುವುದರಿಂದ ಗ್ರಾಮೀಣ ಭಾಗಗಳಲ್ಲಿ ಹಾನಿಯಾಗಿದ್ದು, ಹಾನಗಲ್ಲು ಗ್ರಾಮದ ಲೋಹಿತ್ ಅವರ ಮನೆಗೆ ಗೋಡೆ ಕುಸಿದಿದೆ. ಜೋಸೆಫ್ ಅವರ ಮನೆಯ ಎದುರಿನ ಧರೆ ಕುಸಿದಿದೆ.
ಮಡಿಕೇರಿಯಿಂದ→ ಸೋಮವಾರಪೇಟೆಗೆ ತೆರಳುವ ಹೆದ್ದಾರಿಯ ಕುಂಬೂರು ಗ್ರಾಮದ ರಸ್ತೆಯ ಮೇಲೆ ಮರ ಬಿದ್ದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.