ADVERTISEMENT

ಕೊಡಗಿನಲ್ಲಿ ಕಡಿಮೆಯಾದ ಮಳೆ; ಮುಂದುವರಿದ ಮಣ್ಣು ಕುಸಿತ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 12:46 IST
Last Updated 8 ಜುಲೈ 2022, 12:46 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕಡಿಮೆಯಾಗಿದೆ. ಆದರೆ ಗುರುವಾರ ರಾತ್ರಿ ಬಿದ್ದ ಧಾರಾಕಾರ ಮಳೆಗೆ ನಗರದ ಹಾಕಿ ಮೈದಾನದ ಎದುರು ಮಣ್ಣು ಕುಸಿತವಾಗಿದೆ.

ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಮದೆನಾಡು ಸಮೀಪ ನಿರಂತರವಾಗಿ ಮಣ್ಣು ರಸ್ತೆಗೆ ಕುಸಿಯುತ್ತಿದೆ. ಹೀಗಾಗಿ, ತೆರವು ಕಾರ್ಯಾಚರಣೆಯೂ ನಿರಂತರ ನಡೆಯುತ್ತಿದೆ. ರಸ್ತೆಯ ಒಂದು ಭಾಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಸಂಸದ ಪ್ರತಾಪಸಿಂಹ ಶುಕ್ರವಾರ ತೆರವು ಕಾರ್ಯಾಚರಣೆ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.