ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಕೋಳಿ ಮೊಟ್ಟೆ ಎಸೆದ ಪ್ರಕರಣ ನಡೆದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪೊಲೀಸರು ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದಾರೆ.
ಹೊರ ಜಿಲ್ಲೆಗಳ ಪೊಲೀಸರೂ ಸೇರಿದಂತೆ ಸುಮಾರು ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಎಲ್ಲೆಡೆ ಹದ್ದಿನ ಕಣ್ಣು ನೆಟ್ಟಿದ್ದಾರೆ. ಚೆಕ್‌ಪೋಸ್ಟ್‌ಗಳಲ್ಲಿ ವಿಶೇಷ ನಿಗಾ ಇರಿಸಲಾಗಿದೆ.
ಸುಮಾರು 10 ಮಂದಿಗೆ ಮುನ್ನೆಚ್ಚರಿಕಾ ಕ್ರಮವಾಗಿ ನೋಟಿಸ್ ನೀಡಲಾಗಿದ್ದು, ಅವರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗುತ್ತಿದೆ. ವಿರಾಜಪೇಟೆಯಲ್ಲೂ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.