ಸುಂಟಿಕೊಪ್ಪ: ಸಮೀಪದ ಕೆದಕಲ್ ಗ್ರಾಮ ಪಂಚಾಯಿತಿಯ ಏಳನೇ ಮೈಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸರಣಿ ಅಪಘಾತವಾಯಿತು.
ಸುಂಟಿಕೊಪ್ಪ ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕೆದಕಲ್ 7ನೇ ಮೈಲಿ ಬಳಿ ಪ್ರಯಾಣಿಕರನ್ನು ಇಳಿಸುತ್ತಿದ್ದ ಸಂದರ್ಭ ಹಿಂಬದಿಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆಯಿತು. ಅದರ ಹಿಂದೆ ಬಂದ ಮತ್ತೊಂದು ಕಾರು ಎರಡು ವಾಹನಗಳಿಗೆ ಡಿಕ್ಕಿ ಹೊಡೆದಿದೆ.
ಎರಡು ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.