ADVERTISEMENT

ಎಚ್‍ಐವಿ ಅರಿವು ಆಂದೋಲನ ಪ್ರಯುಕ್ತ ಮ್ಯಾರಾಥಾನ್ : 73 ವಿದ್ಯಾರ್ಥಿಗಳು ಭಾಗಿ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 4:39 IST
Last Updated 31 ಆಗಸ್ಟ್ 2025, 4:39 IST
ಮ್ಯಾರಥಾನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಮ್ಯಾರಥಾನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು   

ಮಡಿಕೇರಿ: ಯುವಜನೋತ್ಸವದ ಎಚ್.ಐ.ವಿ ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ ಮ್ಯಾರಾಥಾನ್ ಸ್ಪರ್ಧೆ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ಯೋತಿ ಸೋಮಯ್ಯ ತಾತಪಂಡ ಅವರು ಹಸಿರು ನಿಶಾನೆ ತೋರಿಸಿದರು.

ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿ, ನಗರದ ಪ್ರಮುಖ ಬೀದಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸರ್ಕಲ್, ಜನರಲ್ ತಿಮ್ಮಯ್ಯ ಸರ್ಕಲ್ (ಜಿ.ಟಿ ಸರ್ಕಲ್) ಮುಖಾಂತರ ಹಾದು ಜನರಲ್ ತಿಮ್ಮಯ್ಯ ಕ್ರೀಡಾಂಗಣವನ್ನು ತಲುಪಿತು.

ADVERTISEMENT

ವಿವಿಧ ಕಾಲೇಜುಗಳಿಂದ ಒಟ್ಟು 73 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮ್ಯಾರಥಾನ್‍ನಲ್ಲಿ ಹುಡುಗರ ವಿಭಾಗದಲ್ಲಿ ನಾಪೋಕ್ಲು ಪ್ರಥಮ ದರ್ಜೆ ಕಾಲೇಜಿನ ಗೌತಮ್ ಎಂ.ಎಸ್.(ಪ್ರಥಮ), ಸೋಮವಾರಪೇಟೆ ಸರ್ಕಾರಿ ಬಿಟಿಸಿಜಿ ಕಾಲೇಜಿನ ಚೇತನ್ (ದ್ವಿತೀಯ) ಮತ್ತು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಗೌತಮ್ ಪಿ.ಸಿ.(ತೃತೀಯ) ಸ್ಥಾನ ಪಡೆದು ವಿಜೇತರಾದರು.

ಮ್ಯಾರಥಾನ್ ಹುಡುಗಿಯರ ವಿಭಾಗದಲ್ಲಿ ಸೋಮವಾರಪೇಟೆ ಸಂತ ಜೋಸೆಫ್ ಕಾಲೇಜಿನ ಐಶ್ವರ್ಯ ಕೆ.ವೈ.(ಪ್ರಥಮ), ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅರ್ಚನಾ ಯು.ಎನ್.(ದ್ವಿತೀಯ) ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಶ್ಮಿತಾ ಎ.ಆರ್.(ತೃತೀಯ) ಸ್ಥಾನ ಪಡೆದಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳಾದ, ಗೌತಮ್. ಎಸ್ ಮತ್ತು ಐಶ್ವರ್ಯ ಅವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಶಾಖೆಯ ರವೀಂದ್ರ ರೈ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ಮತ್ತು ಅಂಥೋನಿ ಡಿಸೋಜ, ಮಹಾಬಲ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತರಬೇತುದಾರರಾದ ಬಿಂದ್ಯಾ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕರಾದ ಸುನೀತ ಮುತ್ತಣ್ಣ, ಉಷಾ, ಕಮಲ, ಮತ್ತು ಟೈನಿ ಹಾಗೂ ಡಿಂಪಲ್, ಚೈತನ್ಯ ಆರೈಕೆ ಮತ್ತು ಬೆಂಬಲ ಕೇಂದ್ರ ಮತ್ತು ಅರುಣ್ ಏ.ಆರ್.ಟಿ. ಕೇಂದ್ರದ ಆಪ್ತಸಮಾಲೋಚಕರು ಹಾಗೂ ವಿವಿಧ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.