ADVERTISEMENT

ಕೊಡಗು: ಮತ್ತೆ ಭಾರಿ ಮಳೆ ಮುನ್ಸೂಚನೆ; ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 12:45 IST
Last Updated 7 ಜುಲೈ 2022, 12:45 IST
ತಲಕಾವೇರಿ ಭಾಗಮಂಡಲ ಪ್ರದೇಶದಲ್ಲಿ ಕಲ್ಲೊಂದು ರಸ್ತೆಗೆ ಉರುಳಿ ಬಿದ್ದಿದೆ
ತಲಕಾವೇರಿ ಭಾಗಮಂಡಲ ಪ್ರದೇಶದಲ್ಲಿ ಕಲ್ಲೊಂದು ರಸ್ತೆಗೆ ಉರುಳಿ ಬಿದ್ದಿದೆ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮತ್ತಷ್ಟು ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಆರೆಂಜ್ ಅಲರ್ಟ್ ಘೋಷಿಸಿದೆ. ಹೀಗಾಗಿ, ಜಿಲ್ಲಾಡಳಿತ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ನೀಡಿದೆ.

ಕಳೆದ ಎರಡು ದಿನಗಳಿಂದಲೂ ಇಲ್ಲಿನ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಳೆದ ಶನಿವಾರ ಆರಂಭವಾಗಿರುವ ಧಾರಾಕಾರ ಮಳೆ ಸುರಿಯುತ್ತಲೇ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT