ADVERTISEMENT

ಮಡಿಕೇರಿ: ಭಾರಿ ಮಳೆ– ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2023, 11:37 IST
Last Updated 24 ಜುಲೈ 2023, 11:37 IST
ಭಾಗಮಂಡಲ- ಸಂಪಾಜೆ ಮೇಕೇರಿಗೆ ವಿದ್ಯುತ್ ಪೂರೈಕೆ ಮಾಡುವ ವಿದ್ಯುತ್ ತಂತಿಯ ಮೇಲೆ ಮರವೊಂದು ಮಡಿಕೇರಿಯ ಅರಣ್ಯ ಭವನದ ಬಳಿ ಉರುಳಿ‌ ಬಿದ್ದಿದೆ
ಭಾಗಮಂಡಲ- ಸಂಪಾಜೆ ಮೇಕೇರಿಗೆ ವಿದ್ಯುತ್ ಪೂರೈಕೆ ಮಾಡುವ ವಿದ್ಯುತ್ ತಂತಿಯ ಮೇಲೆ ಮರವೊಂದು ಮಡಿಕೇರಿಯ ಅರಣ್ಯ ಭವನದ ಬಳಿ ಉರುಳಿ‌ ಬಿದ್ದಿದೆ   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಜಿಲ್ಲಾಡಳಿತ ಸತತ 2ನೇ ದಿನವಾದ ಜುಲೈ 25ರಂದು ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಆದರೆ, ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ರಜೆ ಘೋಷಿಸಿಲ್ಲ.

ಮಧ್ಯಾಹ್ನದ ನಂತರ ಜಿಲ್ಲೆಯ ಹಲವು ಭಾಗಗಳಲ್ಲಿ ಬಿರುಸಿನಿಂದ ಮಳೆ ಸುರಿಯುತ್ತಿದೆ. ಹಾರಂಗಿಯಿಂದ ನದಿಗೆ 20 ಸಾವಿರ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ. 27,520 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಗಾಳಿಯೂ ವೇಗವಾಗಿ ಬೀಸುತ್ತಿದ್ದು, ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಕೆಳಗುರುಳುತ್ತಿವೆ. ನಾಪೋಕ್ಲು, ಅಮ್ಮತ್ತಿ ಹೋಬಳಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT