ಕುಶಾಲನಗರ (ಕೊಡಗು ಜಿಲ್ಲೆ): ಇಲ್ಲಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರ ಮನೆ ಗೋಡೆ ಬುಧವಾರ ನಸುಕಿನಲ್ಲಿ ಕುಸಿದು ಬಿದ್ದಿದೆ. ಗೋಡೆ ಬೀಳುತ್ತಿದ್ದಂತೆ ಮನೆ ಮಂದಿ ಹೊರಬಂದು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ.
ಮಳೆ ನಿಂತರೂ ಜಿಲ್ಲೆಯ ಅಲ್ಲಲ್ಲಿ ಮನೆ ಕುಸಿತ, ಭೂಕುಸಿತಗಳು ಮುಂದುವರಿದಿವೆ. ನಿರಂತರವಾಗಿ ಸುರಿದ ಮಳೆಯಿಂದ ಹಲವು ಮನೆಗಳ ಗೋಡೆಗಳು ಶಿಥಿಲವಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.