ಪ್ರಾತಿನಿಧಿಕ ಪತ್ರ
ಪ್ರಜಾವಾಣಿ ವಾರ್ತೆ
ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2024 ನೇ ವರ್ಷದ ಗೌರವ ಪ್ರಶಸ್ತಿಗೆ ಅರೆಭಾಷೆ ಸಂಸ್ಕೃತಿ, ಸಾಹಿತ್ಯ, ಕಲೆ, ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಂದ ಅರ್ಜಿ ಅಹ್ವಾನಿಸಲಾಗಿದೆ. ತಲಾ ಒಬ್ಬರಂತೆ 3 ಜನ ಸಾಧಕರನ್ನು ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಸ್ವತಃ ಸಾಧಕರು ಸಲ್ಲಿಸುವುದು ಅಥವಾ ಅವರ ಅಭಿಮಾನಿಗಳು ಶಿಫಾರಸ್ಸು ಮಾಡಿ ಸಲ್ಲಿಸಬಹುದು. ಇವರು ಸಲ್ಲಿಸಿರುವ ಸೇವೆ ಮತ್ತು ಸಾಧನೆ ಬಗ್ಗೆ ಮಾಹಿತಿಗಳನ್ನು ಅರ್ಜಿಯ ಜೊತೆಗೆ ಅಕಾಡೆಮಿಗೆ ಒದಗಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ವ್ಯಕ್ತಿ ಪರಿಚಯ ಮತ್ತು ಇತ್ತೀಚಿನ ಭಾವಚಿತ್ರದೊಂದಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.11 ಕೊನೆ ದಿನ.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಗೌರವ ಪ್ರಶಸ್ತಿ 2024-ಯೋಜನೆ’ ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು, ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ 571201. ದೂ: 08272-223055, ಮೊ: 6362522677 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಮಾಹಿತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.