ADVERTISEMENT

ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಹುತ್ತರಿ ಆಚರಣೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 6:49 IST
Last Updated 6 ಡಿಸೆಂಬರ್ 2025, 6:49 IST
ವಿರಾಜಪೇಟೆ ಸಮೀಪದ ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಗುರುವಾರ ಹುತ್ತರಿ ಹಬ್ಬ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು
ವಿರಾಜಪೇಟೆ ಸಮೀಪದ ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಗುರುವಾರ ಹುತ್ತರಿ ಹಬ್ಬ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು   

ವಿರಾಜಪೇಟೆ: ಸಮೀಪದ ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಗುರುವಾರ ಹುತ್ತರಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಆರಂಭದಲ್ಲಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ನಾಗ ದೇವರು ಹಾಗೂ ಶ್ರೀ ವನದುರ್ಗೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾ ಮಂಗಳಾರತಿ ಸೇವೆಯನ್ನು ನಡೆಸಿ, ನಂತರ ನೆರೆ ಕಟ್ಟಲಾಯಿತು.

ಸಮೀಪದ ಮಕ್ಕಿಯ ಶ್ರೀನಿವಾಸ್ ಬಿ.ಆರ್ ಅವರ ಗದ್ದೆಗೆ ತೆರಳಿ ಧಾನ್ಯಲಕ್ಷ್ಮಿಗೆ ಪೂಜೆಯನ್ನು ಸಲ್ಲಿಸಿ, ಹಾಲಿನ ಅಭಿಷೇಕ ಮಾಡಿ ಆರತಿಯನ್ನು ಬೆಳಗಿ ಶ್ರೀ ಇಗ್ಗುತ್ತಪ್ಪ, ಕಾವೇರಮ್ಮೆಯನ್ನು ಪ್ರಾರ್ಥಿಸುವ ಮೂಲಕ ಕದಿರನ್ನು ತೆಗೆಯಲಾಯಿತು. ನೆರೆದಿದ್ದ ಭಕ್ತಾದಿಗಳು ಪೊಲಿ ಪೊಲಿಯೇ ದೇವಾ ಎಂದು ಕೂಗುತ್ತ ಧಾನ್ಯಲಕ್ಷ್ಮಿಗೆ ನಮಿಸಿದರು. ನಂತರ ದೇವಸ್ಥಾನಕ್ಕೆ ತೆರಳಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಪೂಜೆಯನ್ನು ಸಲ್ಲಿಸಿ ಧಾನ್ಯಲಕ್ಷ್ಮಿಯನ್ನು ಪೂಜಿಸಲಾಯಿತು. ನೆರೆದಿದ್ದವರಿಗೆ ಅರ್ಚಕರು ಕದಿರನ್ನು ಹಾಗೂ ಪ್ರಸಾದವನ್ನು ವಿತರಿಸಿದರು. ಗ್ರಾಮಸ್ಥರು ಸಿಡಿಮದ್ದನ್ನು ಸಿಡಿಸಿ ಸಂಭ್ರಮಿಸಿದರು.

ADVERTISEMENT

ಪೂಜಾ ಕಾರ್ಯಕ್ರಮಗಳ ನೇತೃತ್ವವನ್ನು ದೇವಸ್ಥಾನದ ಅರ್ಚಕ ವಾಮನಮೂರ್ತಿ ಭಟ್ ನೆರವೇರಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಪಿ. ಸಂತೋಷ್, ಉಪಾಧ್ಯಕ್ಷ ನಂದ ಬಿ.ಜಿ, ಶೈಲೇಶ್ ಬಿ.ಎಂ, ಕಾರ್ಯದರ್ಶಿ ಬಿ. ಎನ್. ಶಾಂತಿಭೂಷಣ್, ಖಜಾಂಚಿ ಜ್ಯೋತಿ, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.