
ನಾಪೋಕ್ಲು: ಭಾಗಮಂಡಲದ ಕಾವೇರಿ ಕೋಲ್ ಮಂದ್‌ನಲ್ಲಿ ಶುಕ್ರವಾರ ನಾಲ್ಕು ಗ್ರಾಮದವರಿಂದ ಹುತ್ತರಿ ಕೋಲಾಟ ಸಂಭ್ರಮದಿಂದ ನಡೆಯಿತು.
ಭಾಗಮಂಡಲದ ತಾವೂರು, ಚೇರಂಗಾಲ, ಕೋರಂಗಾಲ ಮತ್ತು ತಣ್ಣಿಮಾನಿ ಗ್ರಾಮಸ್ಥರು ಒಟ್ಟಾಗಿ ಕಾವೇರಿ ಹಿರಿಯ ಮಾನಿ ಮಂದ್‌ನಲ್ಲಿ ಹುತ್ತರಿ ಕೋಲಾಟ ನಡೆಯಿತು.
ತಾವೂರು ಗ್ರಾಮದ ಮಹಿಷಾಸುರಮರ್ದಿನಿ ದೇವಾಲಯದ ತಕ್ಕರಾದ ಕುರುಂಜಿ ಬಾಲಕೃಷ್ಣ, ಚೇರಂಗಾಲ ಗ್ರಾಮದ ಸಿರಕಜ್ಜೆ ಸುಂದರ, ತಣ್ಣಿಮಾನಿ ಭಗವತಿ ದೇವಾಲಯದ ತಕ್ಕರಾದ ದಂಡಿನ ರುಕ್ಮಯ್ಯ, ಹಾಗೂ ಕೋರಂಗಾಲ ಗ್ರಾಮದ ಸುಬ್ರಹ್ಮಣ್ಯ ದೇವಾಲಯದ ನಂಗಾರು ವಿಜಯ ನೇತೃತ್ವದಲ್ಲಿ ಪುತ್ತರಿಕೋಲು ನಡೆಯಿತು.
ಬಳಿಕ, ಭಾಗಮಂಡಲಕ್ಕೆ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಒಟ್ಟು ಸೇರಿ ಭಗಂಡೇಶ್ವರ ದೇವಾಲಯಕ್ಕೆ ತೆರಳಿದರು. ಅಲ್ಲಿಂದ ವಾದ್ಯಗೋಷ್ಠಿಯೊಂದಿಗೆ ತೆರಳಿದ ಮಂದಿ ಎಂಟು ಸುತ್ತಿನ ಕೋಲಾಟ ನಡೆಸಿದರು. ನಂತರ, ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ಹಿಂತಿರುಗಿ ಕೋಲು ಒಪ್ಪಿಸಲಾಯಿತು.
ತಣ್ಣಿಮಾನಿ ಗ್ರಾಮದ ಭಗವತಿ ದೇವಾಲಯದಲ್ಲಿ ಹುತ್ತರಿ ಕೋಲು ನಡೆದು ಅಲ್ಲಿಯೇ ಕೋಲು ಒಪ್ಪಿಸುವ ಸಂಪ್ರದಾಯವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.