ADVERTISEMENT

ಕೊಡಗು ನೂತನ ಜಿಲ್ಲಾಧಿಕಾರಿ ವೆಂಕಟ್‍ ರಾಜಾ

​ಪ್ರಜಾವಾಣಿ ವಾರ್ತೆ
Published 19 ಜೂನ್ 2023, 16:13 IST
Last Updated 19 ಜೂನ್ 2023, 16:13 IST
 ವೆಂಕಟ್‍ ರಾಜಾ
ವೆಂಕಟ್‍ ರಾಜಾ   

ಮಡಿಕೇರಿ: ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ವೆಂಕಟ್‍ ರಾಜಾ ಅವರನ್ನು ಕೊಡಗು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಈವರೆಗೂ ಕೊಡಗು ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯಪಾಲಕ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿದೆ. ಇವರು ವರ್ಷಕ್ಕೂ ಅಧಿಕ ಸಮಯದಿಂದ ಕೊಡಗು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT